ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
Cross references
ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,