ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
Cross references
ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.