Home Bibles ನ್ಯಾಯಾಧಿಪತಿಗಳು 5:19 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 5:19 · ಕನ್ನಡ ಬೈಬಲ್

ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.

Cross references

ಆದಿಕಾಂಡ 4:16

ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.

ಆದಿಕಾಂಡ 14:22

ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;

ಯೆಹೋಶುವ 10:22

ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.

ಯೆಹೋಶುವ 11:1

ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ

ಯೆಹೋಶುವ 12:21

ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;

ಯೆಹೋಶುವ 17:11

ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್‌ ಇಬ್ಲೆಯಾಮ್‌ ದೋರ್‌ ಎಂದೋರ್‌ ತಾನಕ್‌ ಮೆಗಿದ್ದೋನ್‌ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.

ನ್ಯಾಯಾಧಿಪತಿಗಳು 1:27

ಮನಸ್ಸೆಯವರು ಬೇತ್‌ಷೆಯಾನ್‌ ತಾನಾಕ್‌ ದೋರ್‌ ಇಬ್ಲೆಯಾಮ್‌ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.

ನ್ಯಾಯಾಧಿಪತಿಗಳು 4:13

ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್‌ ನದಿಗೆ ಬರಮಾಡಿ ದನು.

ನ್ಯಾಯಾಧಿಪತಿಗಳು 5:30

ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

1 ಅರಸುಗಳು 4:12

ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್‌ಷೆ ಯಾನ್‌; ಬೇತ್‌ಷೆಯಾನ್‌ ಮೊದಲುಗೊಂಡು ಅಬೇಲ್‌ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.

ಕೀರ್ತನೆಗಳು 44:12

ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.

ಕೀರ್ತನೆಗಳು 48:4

ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;

ಕೀರ್ತನೆಗಳು 68:12

ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.

ಕೀರ್ತನೆಗಳು 68:13

ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.

ಕೀರ್ತನೆಗಳು 118:8

ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.

ಪ್ರಕಟನೆ 17:12

ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.

ಪ್ರಕಟನೆ 19:19

ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.

Interlinear

Choose Theme