Home Bibles ☰ Books ನ್ಯಾಯಾಧಿಪತಿಗಳು 5:4 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 5:4 · ಕನ್ನಡ ಬೈಬಲ್

ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.

Cross references

ಆದಿಕಾಂಡ 32:4

ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;

ದ್ವಿತೀಯೋಪದೇಶಕಾಂಡ 33:2

ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್‌ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.

2 ಸಮುವೇಲ 22:8

ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.

ಯೋಬ 9:6

ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.

ಕೀರ್ತನೆಗಳು 18:7

ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;

ಕೀರ್ತನೆಗಳು 68:7

ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.

ಕೀರ್ತನೆಗಳು 68:9

ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.

ಕೀರ್ತನೆಗಳು 77:17

ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.

ಯೆಶಾಯ 63:19

ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.

ಮೀಕ 1:4

ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.

ಹಬಕ್ಕೂಕ 3:3

ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್‌ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.

Interlinear

Choose Theme