ನ್ಯಾಯಾಧಿಪತಿಗಳು 6:18 · ಕನ್ನಡ ಬೈಬಲ್
ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
Cross references
ಆದಿಕಾಂಡ 18:3
ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
ಆದಿಕಾಂಡ 18:5
ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
ಆದಿಕಾಂಡ 19:3
ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
ನ್ಯಾಯಾಧಿಪತಿಗಳು 13:15
ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.