ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
Cross references
ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು.
ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.