ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.
ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
ಸೌಲನು ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಅವನು ಕಟ್ಟಿಸಿದ ಮೊದಲನೇ ಬಲಿಪೀಠವು.
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.