Home Bibles ನ್ಯಾಯಾಧಿಪತಿಗಳು 6:34 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 6:34 · ಕನ್ನಡ ಬೈಬಲ್

ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.

Cross references

ಅಂಕೆಗಳ ಪುಸ್ತಕ 10:3

ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.

ಯೆಹೋಶುವ 17:2

ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.

ನ್ಯಾಯಾಧಿಪತಿಗಳು 3:10

ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.

ನ್ಯಾಯಾಧಿಪತಿಗಳು 3:27

ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು

ನ್ಯಾಯಾಧಿಪತಿಗಳು 6:11

ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.

ನ್ಯಾಯಾಧಿಪತಿಗಳು 8:2

ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?

ನ್ಯಾಯಾಧಿಪತಿಗಳು 13:25

ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.

ನ್ಯಾಯಾಧಿಪತಿಗಳು 14:19

ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.

ನ್ಯಾಯಾಧಿಪತಿಗಳು 15:14

ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.

1 ಸಮುವೇಲ 10:6

ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.

1 ಸಮುವೇಲ 11:6

ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ

1 ಸಮುವೇಲ 16:14

ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;

1 ದಿನವೃತ್ತಾಂತ 12:18

ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.

1 ದಿನವೃತ್ತಾಂತ 12:19

ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.

2 ದಿನವೃತ್ತಾಂತ 24:20

ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.

ಕೀರ್ತನೆಗಳು 51:11

ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.

ರೋಮಾಪುರದವರಿಗೆ 13:14

ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

1 ಕೊರಿಂಥದವರಿಗೆ 12:8

ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,

ಗಲಾತ್ಯದವರಿಗೆ 3:27

ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.

Interlinear

Choose Theme