ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
Cross references
ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.