ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
Cross references
ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು.
ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ