Home Bibles ನ್ಯಾಯಾಧಿಪತಿಗಳು 8:10 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:10 · ಕನ್ನಡ ಬೈಬಲ್

ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.

Cross references

ನ್ಯಾಯಾಧಿಪತಿಗಳು 6:5

ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.

ನ್ಯಾಯಾಧಿಪತಿಗಳು 7:12

ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.

ನ್ಯಾಯಾಧಿಪತಿಗಳು 7:13

ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.

ನ್ಯಾಯಾಧಿಪತಿಗಳು 7:22

ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.

ನ್ಯಾಯಾಧಿಪತಿಗಳು 20:2

ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.

ನ್ಯಾಯಾಧಿಪತಿಗಳು 20:15

ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.

ನ್ಯಾಯಾಧಿಪತಿಗಳು 20:17

ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.

ನ್ಯಾಯಾಧಿಪತಿಗಳು 20:25

ಇನ್ನೂ ಇಸ್ರಾಯೇಲ್‌ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.

ನ್ಯಾಯಾಧಿಪತಿಗಳು 20:35

ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.

ನ್ಯಾಯಾಧಿಪತಿಗಳು 20:46

ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

2 ಅರಸುಗಳು 3:26

ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.

2 ದಿನವೃತ್ತಾಂತ 13:17

ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.

2 ದಿನವೃತ್ತಾಂತ 28:6

ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.

2 ದಿನವೃತ್ತಾಂತ 28:8

ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.

ಯೆಶಾಯ 9:4

ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.

ಯೆಶಾಯ 37:36

ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

Interlinear

Choose Theme