Home Bibles ☰ Books ನ್ಯಾಯಾಧಿಪತಿಗಳು 8:12 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:12 · ಕನ್ನಡ ಬೈಬಲ್

ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.

Cross references

ಯೆಹೋಶುವ 10:16

ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.

ಯೆಹೋಶುವ 10:22

ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.

ಯೋಬ 12:16

ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.

ಯೋಬ 34:19

ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.

ಕೀರ್ತನೆಗಳು 83:11

ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್‌ ಜೇಬ್‌ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.

ಯೆಶಾಯ 9:3

ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.

ಆಮೋಸ 2:14

ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

ಪ್ರಕಟನೆ 6:15

ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು

ಪ್ರಕಟನೆ 19:19

ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.

Interlinear

Choose Theme