Home Bibles ☰ Books ನ್ಯಾಯಾಧಿಪತಿಗಳು 8:28 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:28 · ಕನ್ನಡ ಬೈಬಲ್

ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

Cross references

ನ್ಯಾಯಾಧಿಪತಿಗಳು 3:11

ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.

ನ್ಯಾಯಾಧಿಪತಿಗಳು 3:30

ಹೀಗೆ ಆ ದಿನದಲ್ಲಿ ಮೋವಾಬ್‌ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.

ನ್ಯಾಯಾಧಿಪತಿಗಳು 5:31

ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

1 ಸಮುವೇಲ 7:13

ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.

ಕೀರ್ತನೆಗಳು 83:9

ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್‌ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.

ಯೆಶಾಯ 9:4

ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.

ಯೆಶಾಯ 10:26

ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

Interlinear

Choose Theme