Home Bibles ನ್ಯಾಯಾಧಿಪತಿಗಳು 8:30 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 8:30 · ಕನ್ನಡ ಬೈಬಲ್

ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.

Cross references

ಆದಿಕಾಂಡ 2:24

ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಆದಿಕಾಂಡ 7:7

ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.

ಆದಿಕಾಂಡ 46:26

ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.

ನಿರ್ಗಮಕಾಂಡ 1:5

ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.

ದ್ವಿತೀಯೋಪದೇಶಕಾಂಡ 17:17

ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.

ನ್ಯಾಯಾಧಿಪತಿಗಳು 9:1

ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--

ನ್ಯಾಯಾಧಿಪತಿಗಳು 9:2

ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.

ನ್ಯಾಯಾಧಿಪತಿಗಳು 9:5

ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.

ನ್ಯಾಯಾಧಿಪತಿಗಳು 10:4

ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್‌ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.

ನ್ಯಾಯಾಧಿಪತಿಗಳು 12:9

ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.

ನ್ಯಾಯಾಧಿಪತಿಗಳು 12:14

ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್‌ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.

2 ಸಮುವೇಲ 3:2

ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ

2 ಸಮುವೇಲ 5:13

ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.

1 ಅರಸುಗಳು 11:3

ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.

2 ಅರಸುಗಳು 10:1

ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--

ಮಲಾಕಿ 2:15

ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,

ಮತ್ತಾಯ 19:5

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?

ಎಫೆಸದವರಿಗೆ 5:31

ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.

Interlinear

Choose Theme