ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
Cross references
ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.