Home Bibles ☰ Books ನ್ಯಾಯಾಧಿಪತಿಗಳು 9:18 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:18 · ಕನ್ನಡ ಬೈಬಲ್

ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,

Cross references

ನ್ಯಾಯಾಧಿಪತಿಗಳು 8:30

ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.

ನ್ಯಾಯಾಧಿಪತಿಗಳು 8:35

ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್‌ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.

ನ್ಯಾಯಾಧಿಪತಿಗಳು 9:5

ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.

ನ್ಯಾಯಾಧಿಪತಿಗಳು 9:14

ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.

ಕೀರ್ತನೆಗಳು 109:4

ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.

Interlinear

Choose Theme