Home Bibles ನ್ಯಾಯಾಧಿಪತಿಗಳು 9:24 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:24 · ಕನ್ನಡ ಬೈಬಲ್

ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.

Cross references

ಅಂಕೆಗಳ ಪುಸ್ತಕ 35:33

ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.

ದ್ವಿತೀಯೋಪದೇಶಕಾಂಡ 27:25

ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

ನ್ಯಾಯಾಧಿಪತಿಗಳು 1:7

ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.

ನ್ಯಾಯಾಧಿಪತಿಗಳು 9:56

ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.

1 ಸಮುವೇಲ 15:33

ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.

1 ಅರಸುಗಳು 2:32

ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.

1 ಅರಸುಗಳು 2:33

ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.

ಎಸ್ತೇರ್ 9:25

ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;

ಕೀರ್ತನೆಗಳು 7:16

ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.

ಕೀರ್ತನೆಗಳು 7:17

ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.

ಮತ್ತಾಯ 23:34

ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

Interlinear

Choose Theme