Home Bibles ನ್ಯಾಯಾಧಿಪತಿಗಳು 9:38 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:38 · ಕನ್ನಡ ಬೈಬಲ್

ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.

Cross references

ನ್ಯಾಯಾಧಿಪತಿಗಳು 9:28

ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?

1 ಸಮುವೇಲ 2:3

ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.

2 ಸಮುವೇಲ 2:26

ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.

2 ಅರಸುಗಳು 14:8

ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.

ಯೆರೆಮಿಯ 2:28

ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.

Interlinear

Choose Theme