Home Bibles ವಿಲಾಪಗಳು 3:23 · ಕನ್ನಡ ಬೈಬಲ್
ವಿಲಾಪಗಳು 3:23 · ಕನ್ನಡ ಬೈಬಲ್

ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.

Cross references

ನಿರ್ಗಮಕಾಂಡ 34:6

ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

ಕೀರ್ತನೆಗಳು 30:5

ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

ಕೀರ್ತನೆಗಳು 36:5

ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.

ಕೀರ್ತನೆಗಳು 36:6

ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.

ಕೀರ್ತನೆಗಳು 89:1

ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.

ಕೀರ್ತನೆಗಳು 89:33

ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.

ಕೀರ್ತನೆಗಳು 146:6

ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.

ಯೆಶಾಯ 33:2

ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.

ಸೆಫನ್ಯ 3:5

ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.

ತೀತ 1:2

ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು

ಹೆಬ್ರಿಯರಿಗೆ 6:18

ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.

ಹೆಬ್ರಿಯರಿಗೆ 10:23

ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

Interlinear

Choose Theme