ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
Cross references
ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.