Home Bibles ವಿಲಾಪಗಳು 3:43 · ಕನ್ನಡ ಬೈಬಲ್
ವಿಲಾಪಗಳು 3:43 · ಕನ್ನಡ ಬೈಬಲ್

ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.

Cross references

2 ದಿನವೃತ್ತಾಂತ 36:16

ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ಕೀರ್ತನೆಗಳು 44:19

ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.

ಕೀರ್ತನೆಗಳು 80:5

ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.

ಕೀರ್ತನೆಗಳು 83:15

ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.

ವಿಲಾಪಗಳು 2:1

ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!

ವಿಲಾಪಗಳು 2:17

ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.

ವಿಲಾಪಗಳು 2:21

ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.

ವಿಲಾಪಗಳು 3:8

ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.

ವಿಲಾಪಗಳು 3:66

ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.

ಯೆಹೆಜ್ಕೇಲ 7:9

ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.

ಯೆಹೆಜ್ಕೇಲ 8:18

ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.

ಯೆಹೆಜ್ಕೇಲ 9:10

ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.

Interlinear

Choose Theme