ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
Cross references
ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.