Home Bibles ವಿಲಾಪಗಳು 3:45 · ಕನ್ನಡ ಬೈಬಲ್
ವಿಲಾಪಗಳು 3:45 · ಕನ್ನಡ ಬೈಬಲ್

ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.

Cross references

ದ್ವಿತೀಯೋಪದೇಶಕಾಂಡ 28:13

ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.

ದ್ವಿತೀಯೋಪದೇಶಕಾಂಡ 28:37

ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.

ದ್ವಿತೀಯೋಪದೇಶಕಾಂಡ 28:44

ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.

ವಿಲಾಪಗಳು 2:15

ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?

ವಿಲಾಪಗಳು 3:14

ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.

ವಿಲಾಪಗಳು 4:14

ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.

1 ಕೊರಿಂಥದವರಿಗೆ 4:13

ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.

Interlinear

Choose Theme