ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
Cross references
ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--