ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
Cross references
ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್.
ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.