Home Bibles ವಿಲಾಪಗಳು 4:7 · ಕನ್ನಡ ಬೈಬಲ್
ವಿಲಾಪಗಳು 4:7 · ಕನ್ನಡ ಬೈಬಲ್

ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.

Cross references

ಅಂಕೆಗಳ ಪುಸ್ತಕ 6:2

ನೀನು ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ

ನ್ಯಾಯಾಧಿಪತಿಗಳು 13:5

ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.

ನ್ಯಾಯಾಧಿಪತಿಗಳು 13:7

ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.

ನ್ಯಾಯಾಧಿಪತಿಗಳು 16:17

ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.

1 ಸಮುವೇಲ 16:12

ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.

ಕೀರ್ತನೆಗಳು 51:7

ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.

ಕೀರ್ತನೆಗಳು 144:12

ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.

ಪರಮಗೀತ 5:10

ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.

ಪರಮಗೀತ 5:15

ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ.ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.

ದಾನಿಯೇಲ 1:15

ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.

ಆಮೋಸ 2:11

ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.

ಲೂಕ 1:15

ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.

Interlinear

Choose Theme