Home Bibles ವಿಲಾಪಗಳು 5:20 · ಕನ್ನಡ ಬೈಬಲ್
ವಿಲಾಪಗಳು 5:20 · ಕನ್ನಡ ಬೈಬಲ್

ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?

Cross references

ಕೀರ್ತನೆಗಳು 13:1

ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?

ಕೀರ್ತನೆಗಳು 13:2

ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?

ಕೀರ್ತನೆಗಳು 42:10

ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.

ಕೀರ್ತನೆಗಳು 44:24

ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.

ಕೀರ್ತನೆಗಳು 74:1

ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?

ಕೀರ್ತನೆಗಳು 77:7

ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?

ಕೀರ್ತನೆಗಳು 79:5

ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?

ಕೀರ್ತನೆಗಳು 85:5

ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?

ಕೀರ್ತನೆಗಳು 89:46

ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?

ಕೀರ್ತನೆಗಳು 94:3

ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?

ಯೆಶಾಯ 49:14

ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.

ಯೆಶಾಯ 64:9

ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

ಯೆರೆಮಿಯ 14:9

ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 14:19

ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.

Interlinear

Choose Theme