Home Bibles ಲೇವ್ಯಕಾಂಡ 10:11 · ಕನ್ನಡ ಬೈಬಲ್
ಲೇವ್ಯಕಾಂಡ 10:11 · ಕನ್ನಡ ಬೈಬಲ್

ನೀವು ಇಸ್ರಾಯೇಲ್‌ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.

Cross references

ದ್ವಿತೀಯೋಪದೇಶಕಾಂಡ 24:8

ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;

ದ್ವಿತೀಯೋಪದೇಶಕಾಂಡ 33:10

ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.

2 ದಿನವೃತ್ತಾಂತ 15:3

ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.

2 ದಿನವೃತ್ತಾಂತ 17:9

ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.

2 ದಿನವೃತ್ತಾಂತ 30:22

ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.

ನೆಹೆಮ್ಯ 8:2

ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ

ನೆಹೆಮ್ಯ 8:8

ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.

ನೆಹೆಮ್ಯ 9:13

ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.

ಯೆರೆಮಿಯ 2:8

ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.

ಮಲಾಕಿ 2:7

ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಅಪೋಸ್ತಲರ ಕೃತ್ಯಗಳು 20:27

ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.

1 ತೆಸಲೋನಿಕದವರಿಗೆ 4:2

ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.

Interlinear

Choose Theme