Home Bibles ಲೇವ್ಯಕಾಂಡ 10:2 · ಕನ್ನಡ ಬೈಬಲ್
ಲೇವ್ಯಕಾಂಡ 10:2 · ಕನ್ನಡ ಬೈಬಲ್

ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.

Cross references

ಲೇವ್ಯಕಾಂಡ 9:24

ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ಲೇವ್ಯಕಾಂಡ 10:5

ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.

ಲೇವ್ಯಕಾಂಡ 16:1

ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.

ಅಂಕೆಗಳ ಪುಸ್ತಕ 3:3

ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.

ಅಂಕೆಗಳ ಪುಸ್ತಕ 3:4

ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.

ಅಂಕೆಗಳ ಪುಸ್ತಕ 14:37

ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.

ಅಂಕೆಗಳ ಪುಸ್ತಕ 16:32

ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.

ಅಂಕೆಗಳ ಪುಸ್ತಕ 16:35

ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.

ಅಂಕೆಗಳ ಪುಸ್ತಕ 16:49

ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.

ಅಂಕೆಗಳ ಪುಸ್ತಕ 26:61

ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.

1 ಸಮುವೇಲ 6:19

ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.

2 ಸಮುವೇಲ 6:7

ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.

1 ಅರಸುಗಳು 13:28

ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.

2 ಅರಸುಗಳು 1:10

ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.

2 ಅರಸುಗಳು 1:12

ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.

1 ದಿನವೃತ್ತಾಂತ 13:10

ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.

1 ದಿನವೃತ್ತಾಂತ 15:13

ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.

1 ದಿನವೃತ್ತಾಂತ 24:2

ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.

ಯೆಶಾಯ 30:33

ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.

ಅಪೋಸ್ತಲರ ಕೃತ್ಯಗಳು 5:5

ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.

ಅಪೋಸ್ತಲರ ಕೃತ್ಯಗಳು 5:10

ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.

1 ಕೊರಿಂಥದವರಿಗೆ 10:11

ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

Interlinear

Choose Theme