Home Bibles ಲೇವ್ಯಕಾಂಡ 11:20 · ಕನ್ನಡ ಬೈಬಲ್
ಲೇವ್ಯಕಾಂಡ 11:20 · ಕನ್ನಡ ಬೈಬಲ್

ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.

Cross references

ಲೇವ್ಯಕಾಂಡ 11:23

ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.

ಲೇವ್ಯಕಾಂಡ 11:27

ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.

ದ್ವಿತೀಯೋಪದೇಶಕಾಂಡ 14:19

ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು.

2 ಅರಸುಗಳು 17:28

ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.

ಕೀರ್ತನೆಗಳು 17:14

ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.

ಮತ್ತಾಯ 6:24

ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

ಫಿಲಿಪ್ಪಿಯವರಿಗೆ 3:18

(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

2 ತಿಮೋಥೆಯ 4:10

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

1 ಯೋಹಾನ 2:15

ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

ಯೂದ 1:10

ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

ಯೂದ 1:19

ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.

Interlinear

Choose Theme