ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
Cross references
ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.