Home Bibles ☰ Books ಲೇವ್ಯಕಾಂಡ 13:23 · ಕನ್ನಡ ಬೈಬಲ್
ಲೇವ್ಯಕಾಂಡ 13:23 · ಕನ್ನಡ ಬೈಬಲ್

ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.

Cross references

ಆದಿಕಾಂಡ 38:26

ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.

ಲೇವ್ಯಕಾಂಡ 13:26

ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.

2 ಸಮುವೇಲ 12:13

ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

2 ದಿನವೃತ್ತಾಂತ 19:2

ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.

ಯೋಬ 34:31

ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.

ಯೋಬ 40:4

ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.

ಸಾಮೇತಿಗಳು 28:13

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.

ಮತ್ತಾಯ 26:75

ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

2 ಕೊರಿಂಥದವರಿಗೆ 2:7

ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.

ಗಲಾತ್ಯದವರಿಗೆ 6:1

ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

1 ಪೇತ್ರ 4:2

ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

Interlinear

Choose Theme