Home Bibles ಲೇವ್ಯಕಾಂಡ 13:52 · ಕನ್ನಡ ಬೈಬಲ್
ಲೇವ್ಯಕಾಂಡ 13:52 · ಕನ್ನಡ ಬೈಬಲ್

ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,

Cross references

ಲೇವ್ಯಕಾಂಡ 11:33

ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.

ಲೇವ್ಯಕಾಂಡ 11:35

ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.

ಲೇವ್ಯಕಾಂಡ 14:44

ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.

ದ್ವಿತೀಯೋಪದೇಶಕಾಂಡ 7:25

ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.

ಯೆಶಾಯ 30:22

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.

ಅಪೋಸ್ತಲರ ಕೃತ್ಯಗಳು 19:19

ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.

Interlinear

Choose Theme