Home Bibles ಲೇವ್ಯಕಾಂಡ 14:45 · ಕನ್ನಡ ಬೈಬಲ್
ಲೇವ್ಯಕಾಂಡ 14:45 · ಕನ್ನಡ ಬೈಬಲ್

ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

Cross references

1 ಅರಸುಗಳು 9:6

ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ

2 ಅರಸುಗಳು 10:27

ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.

2 ಅರಸುಗಳು 17:20

ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.

2 ಅರಸುಗಳು 18:4

ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.

2 ಅರಸುಗಳು 25:4

ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.

2 ಅರಸುಗಳು 25:25

ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.

ಯೆಹೆಜ್ಕೇಲ 5:4

ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.

ಮತ್ತಾಯ 22:7

ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಮತ್ತಾಯ 24:2

ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.

ರೋಮಾಪುರದವರಿಗೆ 11:7

ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

ಪ್ರಕಟನೆ 11:2

ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.

Interlinear

Choose Theme