Home Bibles ಲೇವ್ಯಕಾಂಡ 14:7 · ಕನ್ನಡ ಬೈಬಲ್
ಲೇವ್ಯಕಾಂಡ 14:7 · ಕನ್ನಡ ಬೈಬಲ್

ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.

Cross references

ಲೇವ್ಯಕಾಂಡ 4:6

ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

ಲೇವ್ಯಕಾಂಡ 4:17

ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.

ಲೇವ್ಯಕಾಂಡ 8:11

ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.

ಲೇವ್ಯಕಾಂಡ 13:13

ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು

ಲೇವ್ಯಕಾಂಡ 13:17

ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.

ಲೇವ್ಯಕಾಂಡ 14:51

ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.

ಲೇವ್ಯಕಾಂಡ 16:14

ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.

ಲೇವ್ಯಕಾಂಡ 16:19

ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್‌ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.

ಲೇವ್ಯಕಾಂಡ 16:22

ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.

ಅಂಕೆಗಳ ಪುಸ್ತಕ 19:12

ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.

ಅಂಕೆಗಳ ಪುಸ್ತಕ 19:18

ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.

ಅಂಕೆಗಳ ಪುಸ್ತಕ 19:19

ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.

2 ಅರಸುಗಳು 5:10

ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

2 ಅರಸುಗಳು 5:14

ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.

ಕೀರ್ತನೆಗಳು 51:2

ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.

ಕೀರ್ತನೆಗಳು 51:7

ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.

ಯೆಶಾಯ 52:15

ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಮೀಕ 7:19

ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

ಯೋಹಾನ 19:34

ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.

ಎಫೆಸದವರಿಗೆ 5:26

ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ

ಹೆಬ್ರಿಯರಿಗೆ 9:13

ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ

ಹೆಬ್ರಿಯರಿಗೆ 9:19

ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--

ಹೆಬ್ರಿಯರಿಗೆ 9:21

ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.

ಹೆಬ್ರಿಯರಿಗೆ 9:26

ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.

ಹೆಬ್ರಿಯರಿಗೆ 10:22

ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

ಹೆಬ್ರಿಯರಿಗೆ 12:24

ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

1 ಪೇತ್ರ 1:2

ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

1 ಯೋಹಾನ 5:6

ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.

Interlinear

Choose Theme