Home Bibles ಲೇವ್ಯಕಾಂಡ 16:22 · ಕನ್ನಡ ಬೈಬಲ್
ಲೇವ್ಯಕಾಂಡ 16:22 · ಕನ್ನಡ ಬೈಬಲ್

ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.

Cross references

ಲೇವ್ಯಕಾಂಡ 14:7

ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.

ಕೀರ್ತನೆಗಳು 103:10

ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.

ಕೀರ್ತನೆಗಳು 103:12

ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೆಹೆಜ್ಕೇಲ 18:22

ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.

ಮೀಕ 7:19

ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

ಯೋಹಾನ 1:29

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಹೆಬ್ರಿಯರಿಗೆ 9:28

ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

1 ಪೇತ್ರ 2:24

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

Interlinear

Choose Theme