Home Bibles ☰ Books ಲೇವ್ಯಕಾಂಡ 16:24 · ಕನ್ನಡ ಬೈಬಲ್
ಲೇವ್ಯಕಾಂಡ 16:24 · ಕನ್ನಡ ಬೈಬಲ್

ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.

Cross references

ನಿರ್ಗಮಕಾಂಡ 28:4

ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.

ನಿರ್ಗಮಕಾಂಡ 29:4

ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.

ಲೇವ್ಯಕಾಂಡ 8:6

ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.

ಲೇವ್ಯಕಾಂಡ 9:7

ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.

ಲೇವ್ಯಕಾಂಡ 14:9

ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.

ಲೇವ್ಯಕಾಂಡ 16:3

ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.

ಲೇವ್ಯಕಾಂಡ 22:6

ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.

ಯೆಹೆಜ್ಕೇಲ 42:14

ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.

ಹೆಬ್ರಿಯರಿಗೆ 9:10

ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಹೆಬ್ರಿಯರಿಗೆ 10:19

ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

ಪ್ರಕಟನೆ 1:5

ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

Interlinear

Choose Theme