ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
Cross references
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.