Home Bibles ಲೇವ್ಯಕಾಂಡ 18:15 · ಕನ್ನಡ ಬೈಬಲ್
ಲೇವ್ಯಕಾಂಡ 18:15 · ಕನ್ನಡ ಬೈಬಲ್

ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

Cross references

ಆದಿಕಾಂಡ 38:18

ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.

ಆದಿಕಾಂಡ 38:26

ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.

ಲೇವ್ಯಕಾಂಡ 20:12

ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.

ಯೆಹೆಜ್ಕೇಲ 22:11

ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.

Interlinear

Choose Theme