Home Bibles ಲೇವ್ಯಕಾಂಡ 18:24 · ಕನ್ನಡ ಬೈಬಲ್
ಲೇವ್ಯಕಾಂಡ 18:24 · ಕನ್ನಡ ಬೈಬಲ್

ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.

Cross references

ಲೇವ್ಯಕಾಂಡ 18:3

ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.

ಲೇವ್ಯಕಾಂಡ 18:6

ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.

ಲೇವ್ಯಕಾಂಡ 18:30

ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.

ಲೇವ್ಯಕಾಂಡ 20:22

ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.

ದ್ವಿತೀಯೋಪದೇಶಕಾಂಡ 9:4

ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ದ್ವಿತೀಯೋಪದೇಶಕಾಂಡ 9:5

ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ದ್ವಿತೀಯೋಪದೇಶಕಾಂಡ 12:31

ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

ದ್ವಿತೀಯೋಪದೇಶಕಾಂಡ 18:12

ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ನ್ಯಾಯಾಧಿಪತಿಗಳು 20:5

ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.

ನ್ಯಾಯಾಧಿಪತಿಗಳು 20:6

ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.

ನ್ಯಾಯಾಧಿಪತಿಗಳು 20:10

ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.

2 ದಿನವೃತ್ತಾಂತ 33:2

ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.

ಯೆರೆಮಿಯ 44:4

ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

ಯೆಹೆಜ್ಕೇಲ 36:17

ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.

ಮತ್ತಾಯ 15:18

ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.

ಮಾರ್ಕ 7:10

ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.

1 ಕೊರಿಂಥದವರಿಗೆ 3:17

ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

Interlinear

Choose Theme