Home Bibles ಲೇವ್ಯಕಾಂಡ 19:32 · ಕನ್ನಡ ಬೈಬಲ್
ಲೇವ್ಯಕಾಂಡ 19:32 · ಕನ್ನಡ ಬೈಬಲ್

ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.

Cross references

ಆದಿಕಾಂಡ 48:12

ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.

ಲೇವ್ಯಕಾಂಡ 19:14

ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.

1 ಅರಸುಗಳು 2:19

ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.

ಯೋಬ 32:4

ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;

ಯೋಬ 32:6

ಆಗ ಬೂಜ್‌ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.

ಸಾಮೇತಿಗಳು 16:31

ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.

ಸಾಮೇತಿಗಳು 20:29

ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

ಯೆಶಾಯ 3:5

ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.

ವಿಲಾಪಗಳು 5:12

ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.

ರೋಮಾಪುರದವರಿಗೆ 13:7

ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

1 ತಿಮೋಥೆಯ 5:1

ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ

1 ಪೇತ್ರ 2:17

ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

Interlinear

Choose Theme