ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
Cross references
ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.