Home Bibles ಲೇವ್ಯಕಾಂಡ 2:3 · ಕನ್ನಡ ಬೈಬಲ್
ಲೇವ್ಯಕಾಂಡ 2:3 · ಕನ್ನಡ ಬೈಬಲ್

ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.

Cross references

ನಿರ್ಗಮಕಾಂಡ 29:37

ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.

ಲೇವ್ಯಕಾಂಡ 2:10

ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.

ಲೇವ್ಯಕಾಂಡ 5:13

ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.

ಲೇವ್ಯಕಾಂಡ 6:9

ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.

ಲೇವ್ಯಕಾಂಡ 6:16

ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಲೇವ್ಯಕಾಂಡ 6:26

ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.

ಲೇವ್ಯಕಾಂಡ 7:7

ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.

ಲೇವ್ಯಕಾಂಡ 7:9

ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.

ಲೇವ್ಯಕಾಂಡ 10:12

ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.

ಲೇವ್ಯಕಾಂಡ 10:15

ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.

ಲೇವ್ಯಕಾಂಡ 14:13

ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.

ಲೇವ್ಯಕಾಂಡ 21:22

ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.

ಅಂಕೆಗಳ ಪುಸ್ತಕ 18:9

ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.

1 ಸಮುವೇಲ 2:28

ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್‌ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?

ಯೆಹೆಜ್ಕೇಲ 44:29

ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

ಯೆಹೆಜ್ಕೇಲ 46:20

ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.

Interlinear

Choose Theme