Home Bibles ಲೇವ್ಯಕಾಂಡ 2:9 · ಕನ್ನಡ ಬೈಬಲ್
ಲೇವ್ಯಕಾಂಡ 2:9 · ಕನ್ನಡ ಬೈಬಲ್

ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.

Cross references

ನಿರ್ಗಮಕಾಂಡ 29:18

ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.

ಲೇವ್ಯಕಾಂಡ 1:9

ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.

ಲೇವ್ಯಕಾಂಡ 2:2

ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.

ಲೇವ್ಯಕಾಂಡ 6:15

ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.

ಅಂಕೆಗಳ ಪುಸ್ತಕ 5:26

ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು.

ಕೀರ್ತನೆಗಳು 22:13

ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.

ಯೆಶಾಯ 53:10

ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

ಜೆಕರ್ಯ 13:7

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ಜೆಕರ್ಯ 13:9

ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

ರೋಮಾಪುರದವರಿಗೆ 12:1

ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

ರೋಮಾಪುರದವರಿಗೆ 15:16

ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.

ಎಫೆಸದವರಿಗೆ 5:2

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಫಿಲಿಪ್ಪಿಯವರಿಗೆ 2:17

ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.

ಫಿಲಿಪ್ಪಿಯವರಿಗೆ 4:18

ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

Interlinear

Choose Theme