ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
Cross references
ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.
ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.