Home Bibles ಲೇವ್ಯಕಾಂಡ 20:23 · ಕನ್ನಡ ಬೈಬಲ್
ಲೇವ್ಯಕಾಂಡ 20:23 · ಕನ್ನಡ ಬೈಬಲ್

ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.

Cross references

ಲೇವ್ಯಕಾಂಡ 18:2

ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ.

ಲೇವ್ಯಕಾಂಡ 18:3

ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.

ಲೇವ್ಯಕಾಂಡ 18:24

ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.

ಲೇವ್ಯಕಾಂಡ 18:27

(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)

ಲೇವ್ಯಕಾಂಡ 18:30

ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.

ದ್ವಿತೀಯೋಪದೇಶಕಾಂಡ 9:5

ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ದ್ವಿತೀಯೋಪದೇಶಕಾಂಡ 12:30

ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.

ಕೀರ್ತನೆಗಳು 78:59

ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,

ಯೆರೆಮಿಯ 10:1

ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;

ಜೆಕರ್ಯ 11:8

ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.

Interlinear

Choose Theme