ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.
Cross references
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.