ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
Cross references
ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.