Home Bibles ಲೇವ್ಯಕಾಂಡ 22:15 · ಕನ್ನಡ ಬೈಬಲ್
ಲೇವ್ಯಕಾಂಡ 22:15 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.

Cross references

ನಿರ್ಗಮಕಾಂಡ 28:43

ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.

ಲೇವ್ಯಕಾಂಡ 19:8

ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.

ಲೇವ್ಯಕಾಂಡ 22:9

ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

ಅಂಕೆಗಳ ಪುಸ್ತಕ 18:32

ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.

ಯೆಹೆಜ್ಕೇಲ 22:26

ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.

Interlinear

Choose Theme