ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
Cross references
ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ